

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ದರ್ಶನ್ ಮತ್ತು ಎಲ್ಲಾ 17 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರಕಾರ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು. ಇಂದು ಈ ಕುರಿತು ವಾದ-ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ನಂತರ ದರ್ಶನ್ ಜಾಮೀನು ಅರ್ಜಿ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
ಬೆನ್ನುನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದಿದ್ದು, ನಂತರ ಅವರಿಗೆ ಸಂಪೂರ್ಣ ಜಾಮೀನು ದೊರಕಿತ್ತು. ಇದನ್ನು ರಾಜ್ಯ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಇವತ್ತು ಅರ್ಜಿ ವಿಚಾರಣೆ ಮಾಡಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದ್ದು, ಅಷ್ಟೇ ಅಲ್ಲದೇ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಕುರಿತು ತನ್ನ ಅಸಮಾಧಾನವನ್ನು ಹೊರಹಾಕಿದೆ.













