Accident: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ!

Accident: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಅಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ.

ಶಿವಮೊಗ್ಗಕ್ಕೆ ಹೊರಟಿದ್ದ ಬಸ್ ಹಾಗೂ ಆನಂದಪುರದಿಂದ ಸಾಗರದತ್ತ ತೆರಳುತ್ತಿದ್ದ ಟ್ರಕ್ ಗಳ ನಡುವೆ ಡಿಕ್ಕಿಯಾಗಿದೆ. ಅಪಘಾತದಲ್ಲಿ (Accident) ಬಸ್ ಚಾಲಕ ಶಿವಾನಂದ ನಾಯ್ಕ ಹಾಗೂ ಕಂಡಕ್ಟರ್ ಫಕೀರಪ್ಪ ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Comments are closed.