Home News Drugs: ಅಕ್ರಮವಾಗಿ ಶೇಖರಣೆ ಮಾಡಿದ್ದ ಗಾಂಜಾ ವಶ – ಮಹಿಳೆ ಪರಾರಿ

Drugs: ಅಕ್ರಮವಾಗಿ ಶೇಖರಣೆ ಮಾಡಿದ್ದ ಗಾಂಜಾ ವಶ – ಮಹಿಳೆ ಪರಾರಿ

Hindu neighbor gifts plot of land

Hindu neighbour gifts land to Muslim journalist

Drugs: ಮನೆಯಲ್ಲಿ ಅಕ್ರಮವಾಗಿ ಶೇಖರಣೆ ಮಾಡಿದ್ದ ಗಾಂಜಾವನ್ನು ವಶಕ್ಕೆ ಪಡೆಯುವಲ್ಲಿ ಅಬಕಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಹನೂರು ತಾಲೂಕಿನ ಜಲ್ಲಿ ಪಾಳ್ಯ ಗ್ರಾಮದ ಕುಂಜಮ್ಮ (48) ಆರೋಪಿಯಾಗಿದ್ದು ದಾಳಿಯ ವೇಳೆ ಪರಾರಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಕೊಳ್ಳೇಗಾಲ ವಲಯ ವ್ಯಾಪ್ತಿಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದ ಬಸ್ ನಿಲ್ದಾಣದ ಬಳಿ ಅಬಕಾರಿ ವೃತ್ತ ನಿರೀಕ್ಷಕ ದಯಾನಂದ ನೇತೃತ್ವದ ತಂಡ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಮನೆಯೊಂದರಲ್ಲಿ ಅಕ್ರಮ ಗಾಂಜಾ ಶೇಖರಣೆ ಮಾಡಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಮಾಹಿತಿ ಮೇರೆಗೆ ಕುಂಜಮ್ಮ ಎಂಬುವರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಕಪ್ಪು ಬಣ್ಣದ ಕವರ್ ನಲ್ಲಿ 212 ಗ್ರಾಂ ಹೂ, ಮೊಗ್ಗು ತೆನೆ ಮತ್ತು ಬೀಜಗಳಿಂದ ಕೂಡಿದ ಒಣ ಗಾಂಜಾ ಶೇಖರಣೆ ಮಾಡಿರುವುದು ಕಂಡು ಬಂದಿದೆ.

ತಕ್ಷಣ ಮಹಿಳೆಯನ್ನು ವಶಕ್ಕೆ ಪಡೆಯುವಾಗ ಪರಾರಿಯಾಗಿದ್ದು, ಗಾಂಜಾವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಗಳಾದ ರಮೇಶ್, ಸೃಜನ್ ರಾಜ್ ಜಯಪ್ರಕಾಶ್ ಮಂಜುನಾಥ್ ಪ್ರಸಾದ್ ಪಾಲ್ಗೊಂಡಿದ್ದರು.

ಇದನ್ನೂ ಓದಿ: Agriculture: ಶುಂಠಿಗೆ ಹೆಚ್ಚಿದ ಬೆಂಕಿ ರೋಗ – ನಿರ್ವಹಣೆಗೆ ತರಬೇತಿ ಕಾರ್ಯಕ್ರಮ – ರೈತರು ಆತಂಕಪಡುವ ಅಗತ್ಯವಿಲ್ಲ