Belthangady: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ- ಬೆಳ್ತಂಗಡಿಯಲ್ಲಿ SIT ಕಚೇರಿ ಓಪನ್!!

Share the Article

Belthangady : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನ ಎಸ್ ಐ ಟಿ ನಡೆಸುತ್ತಿದ್ದು, ಬೆಳ್ತಂಗಡಿಯಲ್ಲೇ ಎಸ್ ಐ ಟಿ ಕಚೇರಿ ಓಪನ್ ಮಾಡಲಿದೆ.

ಹೌದು, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿದೆ ಎಂದು ತಿಳಿದುಬಂದಿದೆ.

ಅಂದಹಾಗೆ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಸದ್ಯ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅವರ ನೇತೃತ್ವದಲ್ಲಿ ತಂಡವು ದಕ್ಷಿಣ ಕನ್ನಡಕ್ಕೆ ತೆರಳಿದೆ‌. ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳರು ಭಾಗದ ಅಧಿಕಾರಿಗಳು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಬೆಳ್ತಂಗಡಿಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: Accident: ದೇವರಕೊಲ್ಲಿ ಬಳಿ ಭೀಕರ ಅಪಘಾತ : ಗೋಣಿಕೊಪ್ಪದ ನಾಲ್ವರು ಯುವಕರು ಸಾ*ವು

Comments are closed.