Koppala: ಗವಿಮಠದಲ್ಲಿ ಅಚ್ಚರಿ ಘಟನೆ – ನಾಗದೇವರೆದರು ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ !!

Koppala: ಕೊಪ್ಪಳದ ಗವಿಮಠ (Gavisiddeshwar Math) ಎಲ್ಲರಿಗೂ ತಿಳಿದೇ ಇದೆ. ಗವಿಮಠದ ಜಾತ್ರೆಯನ್ನು ದಕ್ಷಿಣದ ಕುಂಭಮೇಳ ಎಂದು ಕರೆಯುತ್ತಾರೆ. ಸದ್ಯ ಮಠದಲ್ಲೊಂದು ಅಚ್ಚರಿ ಘಟನೆ ನಡೆಯುತ್ತಿದ್ದು, ಕೆಲವು ದಿನಗಳಿಂದ ಮುಸ್ಲಿಂ ಮಹಿಳೆ ಒಬ್ಬರು ಬಂದು ಇಲ್ಲಿ ಹಗಲು ರಾತ್ರಿ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ.

ಹೌದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿ ಹಸೀನಾ ಬೇಗಂ ಅವರು ಗವಿ ಮಠದಲ್ಲಿ ನಿರಂತರ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಗವಿ ಮಠದ ಶ್ರೀಗಳು ನಿತ್ಯ ಸಂಜೆ ಹೊತ್ತಲ್ಲಿ ಕುಳಿತುಕೊಳ್ಳುವ ಜಾಗದ ಮುಂದೆಯೆ ಮಹಿಳೆಯಿಂದ ಧ್ಯಾನ ಮಾಡಲಾಗುತ್ತಿದ್ದು. ಮಾನಸಿಕ ನೆಮ್ಮದಿಗಾಗಿ ಒಟ್ಟು 11 ದಿನ ಧ್ಯಾನ ಮಾಡುವುದಾಗಿ ಹಸೀನಾ ಬೇಗಂ ಬೇಡಿಕೊಂಡಿದ್ದಾರೆ.
ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಆ ಮುಸ್ಲಿಂ ಮಹಿಳೆ ಮನಸ್ಸಿಗೆ ನೆಮ್ಮದಿ ಇರಲಿಲ್ಲ, ಬಹಳ ಕಷ್ಟ ಇತ್ತು. ಹೀಗಾಗಿ ಶ್ರೀಗಳ ಬಳಿ ಕೇಳಿಕೊಂಡು ಎಂಟು ದಿನದಿಂದ ಧ್ಯಾನ ಮಾಡುತ್ತಿದ್ದೇನೆ. ನಾನು ಮುಸ್ಲಿಂ ಆದರೂ ಎಲ್ಲಾ ಧರ್ಮ ಒಂದೇ. ನಾನು 13 ವರ್ಷದಿಂದ ಗವಿ ಮಠದ ಶ್ರೀಗಳನ್ನು ನಂಬಿದ್ದೇನೆ. ಮಠದಲ್ಲಿ ಮುಸ್ಲಿಂ ಎಂಬ ಬೇಧ-ಭಾವ ಇಲ್ಲ. ನನಗೆ ಒಬ್ಬರಿಂದ ನೋವು ಆಗಿದೆ. ಹಾಗಾಗಿ ನಿತ್ಯ ಒಂದು ಗಂಟೆ ಧ್ಯಾನಕ್ಕೆ ಕೂತಿದ್ದೇನೆ. ನನಗೆ ಬಹಳ ಕಷ್ಟ ಇದೆ, ಪರಿಹಾರ ಆಗತ್ತೆ. ನನ್ನ ಮಕ್ಕಳ ಮೇಲೂ ಅಜ್ಜರ ಆಶೀರ್ವಾದ ಇದೆ. ನಾಗಪ್ಪ, ಬಸವಣ್ಣ ಎಲ್ಲರನ್ನೂ ಪೂಜೆ ಮಾಡುತ್ತೇನೆ. ಮನಸ್ಸಿಗೆ ನೆಮ್ಮದಿ ಸಿಗುತ್ತೆ ಎಂಬ ನಂಬಿಕೆ ಇದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Dharmasthala: ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಬೆಂಗಳೂರಿನ ಭಕ್ತರಿಂದ ದೇವಸ್ಥಾನದಲ್ಲಿ ಉರುಳು ಸೇವೆ!
Comments are closed.