Mangalore: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ!

Share the Article

Mangalore: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ‌ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ.

ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್ನಲ್ಲಿ ರೆಮೋನಾ ಸತತ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ ಭರತನಾಟ್ಯ ಪ್ರದರ್ಶನ ಮಾಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದೀಗ 170 ಗಂಟೆ ಸತತ ಪ್ರದರ್ಶನ ನೀಡುವ ಮೂಲಕ ರೆಮೋನಾ ಪಿರೇರಾ ವಿಶ್ವಮಟ್ಟದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿಗಳ ಸಮ್ಮುಖದಲ್ಲಿಯೇ ರೆಮೋನಾ ಭರತನಾಟ್ಯ ಪ್ರದರ್ಶಿಸಿದ್ದಾರೆ. ಏಳು ದಿನಗಳ‌ ಪ್ರದರ್ಶನ ಕ್ಯಾಮರಾದ ಮೂಲಕ ರೆಕಾರ್ಡ್ ಮಾಡಲಾಗಿದೆ.

ದಾಖಲೆ ಬರೆಯುವುದಕ್ಕಾಗಿ ಭರತನಾಟ್ಯ ಪ್ರದರ್ಶಿಸುತ್ತಿದ್ದ ಸಂದರ್ಭ ರೆಮೋನಾ ಮಿತ ಆಹಾರ ಸೇವಿಸುತ್ತಿದ್ದರು. ಪ್ರತಿ 3 ಗಂಟೆಗೊಮ್ಮೆ 15 ನಿಮಿಷದ ವಿಶ್ರಾಂತಿ ಇರುತ್ತಿತ್ತು. ಈ ವೇಳೆಯಲ್ಲಿ ಬಾಳೆಹಣ್ಣು, ಮೊಸರು, ಎಳನೀರು, ಚೆನ್ನಾಗಿ ಬೇಯಿಸಿದ ಬೆಳ್ತಿಗೆ ಅನ್ನ ಸೇವನೆ ಮಾಡಿದ್ದರು. ಇದಕ್ಕೆಂದೇ ಹಲವು ತಿಂಗಳುಗಳಿಂದ‌ ಆಹಾರ ಕ್ರಮವನ್ನು ಅಭ್ಯಾಸ ಮಾಡಿದ್ದರು.

ಇದನ್ನೂ ಓದಿ: Mangalore: ಪ್ಲಾಸ್ಟಿಕ್ ರಸ್ತೆ, ಬಯೋ ಗ್ಯಾಸ್ ಯೋಜನೆ: ಮಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರಧಾನಿ ಮೋದಿ ಶ್ಲಾಘನೆ!

Comments are closed.