Home News Lakshmi Hebbalkar: ರಾಹುಲ್ ಗಾಂಧಿ ಮಾಡಿದ ತ್ಯಾಗ ದೇಶದ ಎಲ್ಲಾ ಯುವಕರಿಗೆ ಮಾದರಿ ಆಗಬೇಕು –...

Lakshmi Hebbalkar: ರಾಹುಲ್ ಗಾಂಧಿ ಮಾಡಿದ ತ್ಯಾಗ ದೇಶದ ಎಲ್ಲಾ ಯುವಕರಿಗೆ ಮಾದರಿ ಆಗಬೇಕು – ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

Hindu neighbor gifts plot of land

Hindu neighbour gifts land to Muslim journalist

Lakshmi Hebbalkar : ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗಿಯಾಗಿ, ಮಾತನಾಡಿದ ಅವರು, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದ್ರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಕೊಂಡಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ರಾಹುಲ್ ಗಾಂಧಿಯವರು ದೇಶದಾದ್ಯಂತ ಭಾರತ್ ಜೋಡೋ ಯಾತ್ರೆಯ ಮೂಲಕ ಒಗ್ಗಟ್ಟಿನ ಸಂದೇಶವನ್ನು ಸಾರಿದ್ದಾರೆ. ಅವರ ಕಷ್ಟ, ತ್ಯಾಗ ಮತ್ತು ಸಮರ್ಪಣೆ ಯುವಕರಿಗೆ ಮಾದರಿಯಾಗಬೇಕು. ಪ್ರಧಾನಿಯ ಮಗ, ಮೊಮ್ಮಗನಾಗಿದ್ದರೂ ಅವರು ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಿದ್ದಾರೆ. ತೋರಿಕೆಗೆ ಮಾತ್ರ ದೇಶ ಭಕ್ತಿಯ ಹೆಸರಿನಲ್ಲಿ ಬಿಜೆಪಿ ಯುವಕರನ್ನು ವಂಚಿಸುವ ಕೆಲಸ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶ ಎಲ್ಲಾ ಯುವಕರಿಗೆ ಮಾರ್ಗದರ್ಶಿ ಆಗಬೇಕು ಎಂದು ಶ್ಲಾಘಿಸಿದರು.

ಇದನ್ನೂ ಓದಿ: Feroz Chuttipara : 90 ಲಕ್ಷಕ್ಕೂ ಹೆಚ್ಚು ಸಬ್ಸ್ಕ್ರೈಬರ್ಸ್, ಕೋಟಿಗಟ್ಟಲೆ ಆದಾಯವಿದ್ರೂ ಯೂ ಟ್ಯೂಬ್ ಗೆ ಗುಡ್ಬೈ ಖ್ಯಾತ ವ್ಲಾಗರ್ !! ಕೊಟ್ಟ ಕಾರಣ ಅಚ್ಚರಿ