Nagalakshmi Choudhary: ದರ್ಶನ್ ಫ್ಯಾನ್ಸ್ ನಿಂದ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ – 7 ವರ್ಷ ಜೈಲು ಶಿಕ್ಷೆ ಆಗುತ್ತೆ ಹುಷಾರ್ ಎಂದ ಮಹಿಳಾ ಆಯೋಗದ ಅಧ್ಯಕ್ಷೆ

Nagalakshmi Choudhary: ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಸೋಮವಾರ ಲಿಖಿತ ದೂರು ನೀಡಿದ್ದಾರೆ.ಈ ಬೆನ್ನಲ್ಲೇ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (ತಪ್ಪು ಸಾಬೀತಾದರೆ 7 ವರ್ಷ ಜೈಲು ಶಿಕ್ಷೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಾಗಿ ಮಾತನಾಡಿದ ಅವರು ‘ಈ ರೀತಿ ಅವಹೇಳನಕಾರಿ ಪದಗಳನ್ನು ಉಪಯೋಗಿಸಿ, ಹೆಣ್ಣಿನ ಮಾನಹಾನಿ ಮಾಡುವುದು ದೊಡ್ಡ ಅಪರಾಧ. ಇದನ್ನು ನಾವು ಮಾಧ್ಯಮಗಳಲ್ಲಿ ನೋಡಿದ್ದೇನೆ. ನಮಗೆ ದೂರು ಕೂಡ ಬಂದಿದೆ. ಹಾಗಾಗಿ ನಾವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಅಶ್ಲೀಲವಾದ ಕಮೆಂಟ್ಗಳನ್ನು ಮಾಡುತ್ತಿರುವುದು ಕಾನೂನಿನ ಅಡಿಯಲ್ಲಿ ದೊಡ್ಡ ಅಪರಾಧ. ನಾವು ಪೊಲೀಸ್ ಆಯುಕ್ತರಿಗೆ ಪತ್ರವನ್ನು ಬರೆದಿದ್ದೇವೆ’ ಎಂದು ಹೇಳಿದ್ದಾರೆ.
ಅಲ್ಲದೆ ‘ಕಾನೂನು ಇದೆ, ನ್ಯಾಯಾಲಯ ಇದೆ. ತಪ್ಪು ಸಾಬೀತಾದರೆ 7 ವರ್ಷ ಜೈಲು ಶಿಕ್ಷೆ ಆಗುತ್ತದೆ. ಇದು ನಿಮಗೆ ನೆನಪಿರಲಿ. ನೀವು ಕಮೆಂಟ್ ಮಾಡುವುದಕ್ಕೂ ಮುಂಚೆ ಭವಿಷ್ಯದ ಬಗ್ಗೆ ಆಲೋಚನೆ ಮಾಡಬೇಕು. ಇಂಥ ಕಮೆಂಟ್ಗಳನ್ನು ಮಾಡುವುದರಿಂದ ದೂರ ಇರಿ ಎಂದು ನಾನು ಆಯೋಗದ ಅಧ್ಯಕ್ಷೆಯಾಗಿ ಹೇಳುತ್ತಿದ್ದೇನೆ’ ಎಂದು ನಾಗಲಕ್ಷ್ಮಿ ಚೌಧರಿ ಅವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Kalburgi: ಕಲಬುರಗಿ ಇಎಸ್‌ಐ ಆಸ್ಪತ್ರೆಯಲ್ಲಿ ಯುವತಿ ಮೇಲೆ ಸ್ವಚ್ಛತಾ ಸಿಬ್ಬಂದಿಯಿಂದ ಅತ್ಯಾ*ಚಾರ
Comments are closed.