Nimisha Priya: ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು

Share the Article

Nimisha Priya Case: ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ನೀಡಲಾಗಿದ್ದ ಗಲ್ಲು ಶಿಕ್ಷೆಯನ್ನು ಶಾಶ್ವತವಾಗಿ ರದ್ದು ಮಾಡಲಾಗಿದೆ. ಈ ಮಾಹಿತಿಯನ್ನು ಭಾರತೀಯ ಗ್ರ್ಯಾಂಡ್‌ ಮುಫ್ತಿ, ಕಾಂತಪುರಂ ಎಪಿ ಅಬುಬಕ್ಕರ್‌ ಮುಸ್ಲೈಯರ್‌ ಅವರ ಕಚೇರಿ ಹಂಚಿಕೊಂಡಿದೆ.

ಜುಲೈ 16 ರಂದು ನಿಮಿಷಾ ಪ್ರಿಯಾಳಿಗೆ ನಿಗದಿ ಮಾಡಿದ್ದ ಗಲ್ಲು ಶಿಕ್ಷೆಯನ್ನು ಭಾರತದ ಸರಕಾರದ ಮನವಿ ಮತ್ತು ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ನಂತರ ಮುಂದೂಡಲ್ಪಟ್ಟಿತ್ತು. ಯೆಮನ್‌ನ ಹೌತಿ ಅಧಿಕಾರಿಗಳು ಗಲ್ಲು ಶಿಕ್ಷೆಯನ್ನು ಈ ಹಿಂದೆ ಅಮಾನತುಗೊಳಿಸದಿದರು. ಇದೀಗ ಇದನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ.

ಅದಾಗ್ಯೂ ನಿಮಿಷಾ ಪ್ರಿಯಾ ಪ್ರಕರಣದ ಕುರಿತು ಕೆಲವು ವ್ಯಕ್ತಿಗಳು ಹಂಚಿಕೊಂಡಿರುವ ಮಾಹಿತಿ ತಪ್ಪಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖ ಮಾಡಿ ಇಂಡಿಯಾ ಟುಡೇ ವರದಿ ಮಾಡಿದೆ.

ಗ್ರ್ಯಾಂಡ್‌ ಮುಫ್ತಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲಿ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಇದನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಆದಾಗ್ಯೂ ಯೆಮೆನ್‌ ಸರಕಾರದಿಂದ ಅಧಿಕೃತ ಲಿಖಿತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟ ಪಡಿಸಿತ್ತು.

ಇದನ್ನೂ ಓದಿ: BJP- JDS: ಯಶವಂತಪುರ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ BSY !! BJP- JDS ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ

Comments are closed.