Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ!

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ (Lakshmi Hebbalkar) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು, ಮುಂದಿನ ಅಕ್ಟೋಬರ್ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಸರ್ಕಾರಿ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಈ ಕುರಿತು ಸರ್ಕಾರದಿಂದ ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ.
Comments are closed.