Kadaba: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Share the Article

Kadaba: ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಪದವೀಧರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಜು.28 ರಂದು ಬೆಳಿಗ್ಗೆ ಮೃತಪಟ್ಟ ಘಟನೆ ಕುಂತೂರಿನಲ್ಲಿ ನಡೆದಿದೆ.

ಕುಂತೂರು ಗ್ರಾಮದ ಇಡಾಳ ನಿವಸಿ ಕರಿಯಪ್ಪ ಯಾನೆ ಕೇಶವ ಗೌಡ ಅವರ ಪುತ್ರಿ ಶ್ವೇತಾ (23) ಮೃತಪಟ್ಟವರು.

ಶ್ವೇತಾ ಅವರಿಗೆ ಎರಡು ವರ್ಷಗಳ ಹಿಂದೆ ಜ್ವರ ಕಾಣಿಸಿತ್ತು. ನಂತರ ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ವಿವಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಆಗ ಕಿಡ್ನಿ ಸಂಬಂಧಿತ ಕಾಯಿಲೆ ಇರುವುದಾಗಿ ತಿಳಿದು ಬಂದಿದೆ. ಆದರೆ ನಂತರ ನಿರಂತರ ಚಿಕಿತ್ಸೆ ನೀಡಿದರ ಹೊರತಾಗಿಯೂ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ. ಶುಕ್ರವಾರ ಬೆಳಗ್ಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕುಟುಂಬದವರು ಸಮೀಪ ಅಲಂಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಕುಸಿದು ಬಿದ್ದಿದ್ದ ಆಕೆಯನ್ನು ನಂತರ ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿದೆ ಎಂದು ವರದಿಯಾಗಿದೆ.

 

Comments are closed.