Transport Workers: ಇಂದಿನಿಂದ ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

Transport Workers: ಸಮಾನ ವೇತನ, ಕಾರ್ಮಿಕ ಸಂಘಟನೆಗಳ ಚುನಾವಣೆ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ಸಂಘಟನೆ ಅನಿರ್ಧಿಷ್ಟಾವಧಿ ಉಪವಾಸ ಧರಣಿ ನಡೆಸಲು ಮುಂದಾಗಿದೆ.

ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನಿಗಮಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟಗಳು ಸತ್ಯಾಗ್ರಹಕ್ಕೆ ಮುಂದಾಗಿವೆ. ಹಿಂಬಾಕಿ, ಸಮಾನ ವೇತನ, ಕಾರ್ಮಿಕ ಸಂಘಟನೆಗಳ ಚುನಾವಣೆ, ವಜಾಗೊಂಡ ನೌಕರರ ಮರು ನೇಮಕ ಆಗ್ರಹಿಸಿ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಸಾರಿಗೆ ಸಂಘಟನೆಯ ಒಂದು ಬಣ ಆ.5ರಿಂದ ಬಸ್ ನಿಲ್ಲಿಸಿ ಹೋರಾಟ ಮಾಡುವುದಾಗಿ ಕರೆ ಕೊಟ್ಟಿದೆ.
Comments are closed.