Daya nayak: 87 ಗ್ಯಾಂಗ್‌ಸ್ಟರ್‌ಗಳನ್ನು ಶೂಟೌಟ್ ಮಾಡಿರುವ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ನಿವೃತ್ತಿ

Daya nayak: ಗ್ಯಾಂಗ್‌ಸ್ಟರ್‌ಗಳನ್ನು ಎನ್‌ಕೌಂಟರ್ ಮೂಲಕ ಬಿಸಿಮುಟ್ಟಿಸಿ ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್ ಇನ್‌ಸ್ಪೆಕ್ಟರ್ ದಯಾ ನಾಯಕ್ (Daya nayak) ಇಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಇನ್ನು 2 ದಿನ ಮುಂಚೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಎಸಿಪಿ ಹುದ್ದೆಗೆ ಬಡ್ತಿ ನೀಡಿದೆ.

ಈ ಬಗ್ಗೆ ದಯಾ ನಾಯಕ್ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಮೊದಲ ಬಾರಿಗೆ ಎಸಿಪಿ ಸಮವಸ್ತ್ರ ಧರಿಸುತ್ತಿದ್ದೇನೆ. ಶಾಶ್ವತವಾಗಿ ಅದನ್ನು ನೇತುಹಾಕುವ ಒಂದು ದಿನದ ಮೊದಲು. ಇದು ಕೊನೆಯಲ್ಲಿ ಬಂದಿರಬಹುದು. ಇದು ಬಡ್ತಿ ಮಾತ್ರವಲ್ಲದೇ ಜೀವಿತಾವಧಿಯ ಕರ್ತವ್ಯ, ಶಿಸ್ತು ಮತ್ತು ಸಮರ್ಪಣೆ ಗುರುತಿಸುವ ಗೌರವ’ ಎಂದಿದ್ದಾರೆ.
ದಯಾ ನಾಯಕ್ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯವರು. ಮುಂಬೈಗೆ ಸ್ಥಳಾಂತರವಾಗಿದ್ದ ಅವರು 1995ರಲ್ಲಿ ಮಹಾರಾಷ್ಟ್ರದ ಜುಹು ಪೊಲೀಸ್ ಠಾಣೆಯಲ್ಲಿ ತಮ್ಮ ಜೀವನ ಆರಂಭಿಸಿದರು. ಅಲ್ಲಿಂದ ಸುದೀರ್ಘ ಮೂರು ದಶಕಗಳ ಕಾಲ ಸಬ್ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರು ಇಂದು ನಿವೃತ್ತಿ ಆಗಲಿದ್ದಾರೆ.
ಖಡಕ್ ಅಧಿಕಾರಿಯಾಗಿದ್ದ ಇವರು ಗ್ಯಾಂಗ್‌ಸ್ಟರ್‌ಗಳಶೂಟೌಟ್ ಮೂಲಕ ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಗಳಿಸಿದ್ದರು. ದಯಾ ನಾಯಕ್ ತಮ್ಮ ವೃತ್ತಿ ಜೀವನದಲ್ಲಿ 87 ಗ್ಯಾಂಗ್‌ಸ್ಟರ್‌ಗಳನ್ನು ಶೂಟೌಟ್ ಮಾಡಿದ್ದರು. ದಾವೂದ್ ಇಬ್ರಾಹಿಂ, ಅಮರ್ ನಾಯ್ಕ, ಛೋಟಾ ರಾಜನ್, ಅರುಣ್ ಗೌಳಿಯರಂತಹ ಪಾತಕಿಗಳ ನಂಟು ಹೊಂದಿದ್ದವರಿಗೆ ಗುಂಡು ಹಾರಿಸಿದ್ದರು.
ಇದನ್ನೂ ಓದಿ: Mangaluru: ಕೆಂಪುಕಲ್ಲು-ಮರಳು ಸಮಸ್ಯೆ: ಕರಾವಳಿಯ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ
Comments are closed.