Vehicle Towing: ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್- ಗೃಹ ಸಚಿವ ಪರಮೇಶ್ವರ್ ಘೋಷಣೆ

Vehicle Towing: ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ. ಈ ಬಾರಿ ಗುತ್ತಿಗೆ ನೀಡುವುದಿಲ್ಲ, ಇಲಾಖೆಯಿಂದಲೇ ಟೋಯಿಂಗ್ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಪಾರ್ಕಿಂಗ್ ಸಮಸ್ಯೆ ತಲೆ ನೋವಾಗಿದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುವುದು. ಪೊಲೀಸರಿಗೆ ಜನರ ಜತೆ ಮಾನವೀಯತೆಯಿಂದ ವರ್ತಿಸಲು, ಶಾಂತಿಯಿಂದ ವರ್ತಿಸಲು ಸೂಚಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.
Comments are closed.