Bangalore: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿಯ ಚಿನ್ನ ದೋಚಿದ್ದ ಆರೋಪಿ ಬಂಧನ

Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿಯ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧನ ಮಾಡಿದ್ದಾರೆ.

ಸ್ಟಾಲಿನ್ (32) ಬಂಧಿತ ಆರೋಪಿ.
ದಿವ್ಯಾಂಶಿ (13) ಎನ್ನುವ ಬಾಲಕಿ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಳು. ಮರಣೋತ್ತರ ಪರೀಕ್ಷೆಯ ವೇಳೆ ಚಿನ್ನಾಭರಣ ಕಳವು ಮಾಡಿದ ಪ್ರಕರಣದಲ್ಲಿ ಶವಾಗಾರದ ಸಿಬ್ಬಂದಿ ಸ್ಟಾಲಿನ್ನನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಜುಲೈ 24 ರಂದು ಬಾಲಕಿಯ ತಾಯಿ ದೂರನ್ನು ನೀಡಿದ್ದು, ಆರೋಪಿಯನ್ನು ಇದೀಗ ಬಂಧನ ಮಾಡಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕಳವು ಚಿನ್ನಾಭರಣ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.
Comments are closed.