Rape Case: ಶಿಕ್ಷೆ ಕೊಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ: ಕೋರ್ಟಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಪ್ರಜ್ವಲ್‌ ರೇವಣ್ಣ

Share the Article

Rape Case: ಕೆ.ಆರ್ ನಗರದಲ್ಲಿ (KR Nagara) ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ (Rape Case) ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದ ಪೂರ್ಣಗೊಂಡಿದ್ದು, ಇಂದು ಮಧ್ಯಾಹ್ನ 2:45ಕ್ಕೆ ನ್ಯಾ. ಗಜಾನನ ಭಟ್‌ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.

ಇನ್ನೂ ವಾದ-ಪ್ರತಿವಾದದ ಬಳಿಕ ನಿಮ್ಮದೇನಾದ್ರೂ ಹೇಳೋದು ಇದ್ಯಾ? ಅಂತ ಕೇಳಿದಾಗ, ಪ್ರಜ್ವಲ್‌ ಈ ವೇಳೆ ಬಿಕ್ಕಿ ಬಿಕ್ಕಿ ಅತ್ತು, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ, ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್‌ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ತಾ ಇದ್ರಾ? ಅಂತ ಕಣ್ಣೀರಿಟ್ಟರು.

ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ ಅಂತ ಹೇಳಿದ್ದಾರೆ. ವಿಡಿಯೋ ಬಂದ ಮೇಲೆ ಮಹಿಳೆ ಹೊರಗೆ ಬಂದು ದೂರು ನೀಡಿದ್ದಾಳೆ. ನನ್ನ ಕುಟುಂಬವನ್ನೇ ನಾನು ಬಿಟ್ಟಂತೆ ಆಗಿಹೋಗಿದೆ. ಅಪ್ಪ – ಅಮ್ಮನನ್ನ 6 ತಿಂಗಳಿಂದ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಅಂತ ನ್ಯಾಯಾಧೀಶರ ಎದುರು ಪ್ರಜ್ವಲ್‌ ಕಣ್ಣೀರಿಟ್ಟು ಬೇಡಿಕೊಂಡಿದ್ದಾರೆ.

ನಂಗೆ ಕುಟುಂಬ ಇದೆ, 6 ತಿಂಗಳಿಂದ ಅಪ್ಪ-ಅಮ್ಮನನ್ನ ಸರಿಯಾಗಿ ನೋಡಿಲ್ಲ. ಪ್ರತಿಬಾರಿಯೂ ಕೋರ್ಟ್‌ಗೆ ಬರ್ತಾ ಇದ್ದೀನಿ. ನನ್ನ ಕುಟುಂಬ ನನ್ನಿಂದ ಸಂಪೂರ್ಣ ದೂರವಾಗಿದೆ. ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್‌ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ರು ಅಂತ ಗಳಗಳನೆ ಅತ್ತಿದ್ದಾರೆ.

ಇದನ್ನೂ ಓದಿ: Encounter: ಜಮ್ಮು-ಕಾಶ್ಮೀರದಲ್ಲಿ ʻಆಪರೇಷನ್‌ ಅಖಾಲ್‌ʼ ಸೇನಾ ಕಾರ್ಯಾಚರಣೆ: ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

Comments are closed.