Dakshina Kannada: ಧರ್ಮಸ್ಥಳ ತಲೆ ಬುರುಡೆ ಪ್ರಕರಣ: ಶವ ಹೂತ ಕೇಸ್ ವಾಪಸ್ ಪಡೆಯಲು ದೂರುದಾರನಿಗೆ ಒತ್ತಡ? ಎಸ್‌ಐಟಿ ತಂಡದ ಅಧಿಕಾರಿಗಳಿಂದ ನಿರಾಕರಣೆ?

Dakshina Kannada: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಾಮಿಕ ವ್ಯಕ್ತಿಗೆ ಈ ಕೇಸಿನಲ್ಲಿ ನಿಮಗೆ ಶಿಕ್ಷೆಯಾಗುತ್ತದೆ, ಕೂಡಲೇ ದೂರನ್ನು ವಾಪಸ್ ಪಡೆದುಕೊಳ್ಳುವಂತೆ ಎಸ್‌ಐಟಿ ತನಿಖಾ ತಂಡದ ಇನ್ಸ್‌ಪೆಕ್ಟರ್ ಒಬ್ಬರು ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರುದಾರ ತನ್ನ ವಕೀಲರಿಗೆ ತಿಳಿಸಿದ್ದು, ಇದನ್ನು ಎಸ್‌ಐಟಿ ತಂಡದ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಎಸ್‌ಐಟಿ ತಂಡದಲ್ಲಿರುವ ಅಧಿಕಾರಿ ಈ ಕೇಸಿನಲ್ಲಿ ನಿನಗೆ ಶಿಕ್ಷೆ ಆಗುವ ಸಾಧ್ಯತೆ ಇದ್ದು, ನೀನು ಕೊಟ್ಟಿರುವ ದೂರನ್ನು ವಾಪಸ್ ಪಡೆಯುವಂತೆ ದೂರುದಾರನಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೊಂಡಿದ್ದು, ವಕೀಲರಿಗೆ ಮಾಸ್ಕ್‌ಮ್ಯಾನ್ ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ವಕೀಲರು ಎಸ್‌ಐಟಿ ತಂಡದ ಹಿರಿಯ ಅಧಿಕಾರಿಗಳಿಗೆ ಈ ಕುರಿತು ಪ್ರಶ್ನೆ ಮಾಡಲಾಗಿದ್ದು, ಇದನ್ನು ಹಿರಿಯ ಅಧಿಕಾರಿಗಳು ಅಲ್ಲಗಳೆದಿದ್ದಾರೆ.
ಈ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿರುವ ಹಿರಿಯ ಅಧಿಕಾರಿಗಳು, ಯಾವುದೇ ಅಧಿಕಾರಿಯು ತನಿಖಾ ಕರ್ತವ್ಯ ದೌರ್ಜನ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.
Comments are closed.