Encounter: ಜಮ್ಮು-ಕಾಶ್ಮೀರದಲ್ಲಿ ʻಆಪರೇಷನ್‌ ಅಖಾಲ್‌ʼ ಸೇನಾ ಕಾರ್ಯಾಚರಣೆ: ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿ

Share the Article

Encounter: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್‌ ಅಖಾಲ್‌ʼ (Operation Akhal) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ (South Kashamir) ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ (Intelligence) ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ʻಆಪರೇಷನ್‌ ಅಖಾಲ್‌ʼ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ ಪಡೆಗಳು ಓರ್ವ ಉಗ್ರನನ್ನ ಹತ್ಯೆಗೈದಿವೆ ಎಂದು ಪೊಲೀಸ್‌ (J&K Police) ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Tirupati: ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ ಮಾಹಿತಿ ಇಲ್ಲಿದೆ!

Comments are closed.