Prajwal Revanna Case: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ: ರೇವಣ್ಣ ಮುಂದಿನ ಆಯ್ಕೆ ಏನಿದೆ?

Prajwal Revanna Case: ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣಗೆ ಜೀವಾವದಿ ಶಿಕ್ಷೆ ಪ್ರಕಟಗೊಂಡಿದ್ದು, ಹಾಗಾದರೆ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಬನ್ನಿ ತಿಳಿಯೋಣ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಪ್ರಕಾರ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ನೀಡಲಾಗಿದ್ದು, ಮುಂದಿನ ನಡೆಯಾಗಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ. ಹೀಗಾಗಿ ಒಂದು ವೇಳೆ ಹೈಕೋರ್ಟ್ ಈ ತೀರ್ಪಿಗೆ ತಾತ್ಕಾಲಿಕ ತಡೆ ನೀಡಿದರೆ, ಉಳಿದ ಮೂರು ಪ್ರಕರಣಗಳಲ್ಲಿ ಜಾಮೀನಿಗೆ ಅವರು ಕಾನೂನು ಹೋರಾಟ ಮಾಡಬಹುದು.
ಆದರೆ ಹೈಕೋರ್ಟ್ ಕೂಡಾ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದರೆ, ಆಗ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಆಯ್ಕೆ ಮಾತ್ರ ಇರುತ್ತದೆ. ಆದರೆ ಸುಪ್ರೀಂ ಕೋರ್ಟ್ ಕೂಡಾ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿದರೆ ಆಗ ಈ ಮೊದಲೇ ನೀಡಿದ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.
Comments are closed.