Suhas Shetty Murder Case: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ 14 ಕಡೆ ಎನ್ಐಎ ದಾಳಿ!

Share the Article

Suhas Shetty Murder Case: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು‌. ಹತ್ಯೆ ಮಾಡಿದ ಮತ್ತು ಹತ್ಯೆಗೆ ಸಹಕರಿಸಿದವರು ಸೇರಿದಂತೆ 12‌ ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ (Suhas Shetty Murder Case) ಎನ್ಐಎ ಗೆ ನೀಡಿತ್ತು.

ಇದೀಗ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.

ಇದನ್ನೂ ಓದಿ: Dharmasthala: ಧರ್ಮಸ್ಥಳ: 9ನೆಯ ಸ್ಥಳದಲ್ಲಿಯು ಸಿಗದ ಅವಶೇಷಗಳು!

Comments are closed.