Mandya: KRS ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು: ಸಚಿವ ಹೆಚ್‌.ಸಿ.ಮಹದೇವಪ್ಪ

Share the Article

Mandya: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅಭಿವೃದ್ಧಿ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಪುತ್ರ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿವಾದಕ್ಕೆ ಕಾರಣರಾಗಿದ್ದರು. ಇದರ ಬೆನ್ನಲ್ಲೇ ಇದೀಗ ಸಚಿವ ಹೆಚ್‌.ಸಿ.ಮಹದೇವಪ್ಪ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಟಿಪ್ಪು ಹೊಗಳುವ ಭರದಲ್ಲಿ ಮೈಸೂರು ಅರಸರ ಸಾಧನೆಯನ್ನು ಕಡೆಗಣಿಸುವ ಕೆಲಸ ಮಾಡಿದ್ದಾರೆ. ʼಕೆ.ಆರ್‌.ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಎಂದು ಮಂಡ್ಯದಲ್ಲಿ ಮಾತನಾಡಿದ್ದಾರೆ.

ಕೆ.ಆರ್‌.ಎಸ್‌ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌. ಈ ಬಗ್ಗೆ ಕೆ.ಆರ್‌.ಎಸ್‌ ಗೇಟ್‌ ಹೆಬ್ಬಾಗಿಲಿನಲ್ಲಿ ಸಾಕ್ಷಿ ಇದೆ. ಆದರೆ ಅದನ್ನು ಹೇಳೋಕೆ ಯಾರಿಗೂ ಧೈರ್ಯವಿಲ್ಲ ಎಂದು ಹೇಳಿದ್ದಾರೆ.

Comments are closed.