Nikhil Kumaraswamy: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ – ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Nikhil Kumaraswamy : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿದ್ದು, ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿದ ದೇವೇಗೌಡ ಕುಟುಂಬ ಇದೀಗ ತಲೆ ತಗ್ಗಿಸುವಂತಾಗಿದೆ. ಇದೀಗ ಈ ಪ್ರಕರಣದ ಕುರಿತಾಗಿ ಜೆಡಿಎಸ್ ಯುವನಾಯಕ ಹಾಗೂ ಪ್ರಜ್ವಲ್ ರೇವಣ್ಣ ಅವರ ಸಹೋದರ ನಿಖಿಲ್ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಮಾತನಾಡಿದ ನಿಖಿಲ್, ಕೋರ್ಟ್ ತೀರ್ಪಿಗೆ ತಲೆಬಾಗಬೇಕು. ಯಾರೇ ಇದ್ದರೂ ತಲೆಬಾಗಬೇಕು. ಈ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಅಲ್ಲದೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಬಂದಾಗಲೇ ಜೆಡಿಎಸ್ ಪಕ್ಷದಿಂದ ಅವರನ್ನು ಅಮಾನತುಗೊಳಿಸಲಾಗಿತ್ತು. ಆಗಿನ್ನೂ ಅವರು ಅಪರಾಧಿಯೋ ಅಥವಾ ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ಪಕ್ಷದ ವರಿಷ್ಠರ ತೀರ್ಮಾನದ ಸ್ಪಷ್ಟತೆಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದರು.
Comments are closed.