Mangaluru : ಧರ್ಮಸ್ಥಳ ಪ್ರಕರಣ- ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮೂಕ, ಸಂಸದರ ನಡೆ ಸಂಶಯಾಸ್ಪದ – SDPI

Share the Article

Mangaluru: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿನ ನಂತರ ಕೂಡಾ ಇಲ್ಲಿನ ವಿದ್ಯಮಾನಗಳ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪ ಮಾಡದ ಮಂಗಳೂರು ನಗರ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ನಡೆ ಸಂದೇಹಾಸ್ಪದ ಎಂದು ಎಸ್ ಡಿಪಿಐ ದಕ್ಷಿಣ ಕನ್ನಡ ನಗರ ಘಟಕದ ಅಧ್ಯಕ್ಷ ಅಬ್ದುಲ್ ಜಲೀಲ್ ಕೆ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೋಮುದ್ವೇಷದಿಂದ ನಡೆದ ಕೊಲೆಗಳಿಗೆ ಸಂಬಂಧಪಟ್ಟು ಬಿಜೆಪಿ ಮತ್ತು ಸಂಘ ಪರಿವಾರದವರು ಬೊಟ್ಟು ಮಾಡಿ ತೋರಿಸಿದ ಎಸ್ ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಆದರೆ ಅಲ್ಲಿ ಧರ್ಮಸ್ಥಳದಲ್ಲಿ ಮೃತ ಶರೀರದ ಅವಶೇಷಗಳು ಸಿಗುತ್ತವೆಯೋ ಇಲ್ಲವೋ ಎಂಬ ಆತಂಕದಲ್ಲಿ ಇಡೀ ಊರಿನ ಮತ್ತು ರಾಜ್ಯದ ಜನರು ಇರುವಾಗ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಅಧಿವೇಶನದಲ್ಲಿ ಒಂದು ಮಾತೂ ಆಡುತ್ತಿಲ್ಲ. ಧರ್ಮಸ್ಥಳ ಪ್ರಕರಣವನ್ನು ದಿಕ್ಕು ತಪ್ಪಿಸುವ ಪ್ರಯತ್ನದ ಭಾಗವಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತ ಎಸ್ ಡಿಪಿಐ ಮುಖಂಡರ ಮನೆ ಮೇಲೆ ದಾಳಿ ನಡೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಬ್ದುಲ್ ಜಲೀಲ್ ದೂರಿದ್ದಾರೆ.

ಇಂದು, ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಧರ್ಮಸ್ಥಳದಲ್ಲಿ ಕೊಲೆಯಾದ ಹುಡುಗಿಯ ಪರ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಎಸ್‌ ಡಿಪಿಐ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸಲಾಗುತ್ತಿದೆ ಎಂದರು. ಆದರೆ ಎಸ್ ಡಿಪಿಐ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು

Comments are closed.