High Court: ಮುಷ್ಕರ ನಡೆಸಲು ತಯಾರಿ ನಡೆಸಿದ್ದ ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್!! ನಾಳೆ ಬಸ್ ಇರುತ್ತೋ ಇಲ್ವೋ?

High Court : ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಮಾತುಕತೆ ವಿಫಲವಾಗಿದೆ. ಹೀಗಾಗಿ ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ನಡೆಸಲು ಎಲ್ಲಾ ತಯಾರಿ ನಡೆದಿತ್ತು. ಈ ತಯಾರಿ ನಡುವೆ ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್ ನೀಡಿದೆ. ನಾಳೆಯ ವರೆಗೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಹೌದು, ಸಾರಿಗೆ ನೌಕರರ ಮುಷ್ಕರ (Transport Employees Strike) ಪ್ರಶ್ನಿಸಿ ಹೈಕೋರ್ಟ್ಗೆ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು. ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಸೂಚನೆ ನೀಡಿದೆ.
ಇಂದು ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಕಲಾಪವಿರಲಿಲ್ಲ. ಹೀಗಾಗಿ, ಇಂದು (ಆ.04) ನ್ಯಾ.ಕೆ.ಎಸ್.ಮುದಗಲ್, ನ್ಯಾ.ಎಂ.ಜಿ.ಎಸ್.ಕಮಲ್ ಅವರ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆದಿತ್ತು. ನಾಳೆ (ಆ.05) ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲೇ ವಿಚಾರಣೆ ನಡೆಯಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು. ಈ ಸಂಬಂಧ ವಿಚಾರಣೆಯನ್ನು ಮಂಗಳವಾರಕ್ಕೆ (ಆ.05) ಮುಂದೂಡಿದೆ.
ಅಂದಹಾಗೆ ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದ್ದು, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ. ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
Comments are closed.