Dharmasthala : ಮಹೇಂದ್ರ ಕಂಪೆನಿಯ ಹೊಸ ಮಾದರಿಯ ಬಿ.ಇ:6 ಕಾರು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಣೆ !!

Dharmasthala : ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಕಾರೊಂದನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದೆ.

ಹೌದು, ಮಹೇಂದ್ರ ಕಂಪೆನಿಯು ತನ್ನ ಹೊಸ ಮಾದರಿಯ ಬಿ.ಇ. : 6 ಕಾರನ್ನು (ಕೆ.ಎ. 21 ಎಂ.ಎ.-6033) ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.
ಕಾರನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.
ಕಾರನ್ನು ಸ್ವೀಕರಿಸಿದ ಹೆಗ್ಗಡೆಯವರು ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ.
Comments are closed.