Dharmasthala Case: ಧರ್ಮಸ್ಥಳ ಕೇಸ್ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ

Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಬಂಧನ ಆದೇಶ ಕೋರಲಾದ ಅಸಲು ದಾವೆ ವಿಚಾರಣೆ ಮಾಡುತ್ತಿರುವ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಸೆಷನ್ಸ್ ನ್ಯಾಯಾಧೀಶ ವಿಜಯ್ ಕುಮಾರ್ ರೈ ತಮ್ಮ ಮುಂದಿರುವ ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗಡೆ, ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ದೇಶಿಸಲು ಕೋರಿದ ಅಸಲು ದಾವೆಯ ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಧೀಶರಿಗೆ 10ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ವಿಜಯಕುಮಾರ್ ರೈ ಕೋರಿದ್ದಾರೆ ಎನ್ನಲಾಗಿದೆ.
ಮಾನಹಾನಿ ವಿಷಯ ಪ್ರಸಾರವನ್ನು ಪ್ರಕಟ ಮಾಡದಂತೆ ವಿಚಾರಣೆ ಮಾಡಿದ ನ್ಯಾಯಾಧೀಶ ವಿಜಯಕುಮಾರ್ ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ನಿರ್ಬಂಧಕಾಜ್ಞೆ ಹೊರಡಿಸಿದ್ದರು. ಇದನ್ನು ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ, ಬೈರಪ್ಪ ಹರೀಶ್ ಕುಮಾರ್ ಪ್ರಶ್ನೆ ಮಾಡಿದ್ದರು.
ನ್ಯಾಯಾಧೀಶ ವಿಜಯ್ ಕುಮಾರ್ ಅವರು ಮಂಗಳೂರಿನ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷದ ಹಿಂದಿನ ವಿದ್ಯಾರ್ಥಿಯಾಗಿದ್ದು, ಹೀಗಾಗಿ ಹಾಲಿ ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ ಮೆಮೋ ಸಲ್ಲಿಸಿದ್ದರು.
Comments are closed.