Home News Suicide: ಕಾರು ಚಾಲಕನೊಬ್ಬ ಬಿಜೆಪಿ ಸಂಸದರ ಹೆಸರು ಬರೆದಿಟ್ಟು ಆತ್ಮಹತ್ಯೆ!

Suicide: ಕಾರು ಚಾಲಕನೊಬ್ಬ ಬಿಜೆಪಿ ಸಂಸದರ ಹೆಸರು ಬರೆದಿಟ್ಟು ಆತ್ಮಹತ್ಯೆ!

Hindu neighbor gifts plot of land

Hindu neighbour gifts land to Muslim journalist

Suicide: ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಎಂಬ ವ್ಯಕ್ತಿಯೊಬ್ಬರು ವೃತ್ತಿಯಲ್ಲಿ ಕಾರು ಚಾಲಕರಾಗಿದ್ದು ಇದೀಗ ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.