Kalaburagi : ಕುಡಿತದ ಚಟಪಿಡಿಸಲು ನಾಟಿ ಔಷಧಿ ಸೇವನೆ – ಮೂವರು ಸಾವು!!

Share the Article

Kalaburagi : ಕುಡಿತದ ಚಟ ಬಿಡಿಸಲು ನೀಡಿದಂತ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿರುವಂತ ಶಾಂಕಿಂಗ್ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಒದ್ದಾಡಿ, ಒದ್ದಾಡಿ ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸೇಡಂ ತಾಲ್ಲೂಕಿನ ಬುರಗಪಳ್ಳಿ ಗ್ರಾಮದ ಲಕ್ಷ್ಮೀ ನರಸಿಂಹಲು(45) ಹಾಗೂ ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್(30) ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಮೃತರು. ಇದೇ ಔಷಧಿ ಸೇವಿಸಿದ ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪನರಸಿಂಹಲು ಅವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಮಡಾಪುರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಸಾಯಪ್ಪ ಅವರು ಕುಡಿತದ ಚಟ ಬಿಡಿಸಲು ಔಷಧ ನೀಡುತ್ತಿದ್ದರು. ನಾಲ್ವರು ಔಷಧ ಪಡೆದಿದ್ದರು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯಂತೆ ಮದ್ಯ ಸೇವನೆ ವ್ಯಸನದಿಂದ ಹೊರಬರಲು ಕೆಲವರು ನಾಟಿ ಔಷಧ ಪಡೆದಿದ್ದರು. ಭಾನುವಾರ ಔಷಧ ಪಡೆದಿದ್ದ ಜನರು ಮತ್ತೆ ಬುಧವಾರವೂ ಬಂದು ಔಷಧ ಪಡೆದಿದ್ದರು. ಆದರೆ, ಔಷಧ ಸೇವಿಸಿದ ಕೆಲವೇ ಗಂಟೆಗಳಲ್ಲಿ ಈ ದುರಂತ ಸಂಭವಿಸಿದೆ. ಈ ಸಂಬಂಧ ಸೇಡಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಔಷಧ ನೀಡಿದ ಫಕೀರಪ್ಪ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: Urea Poroblem: ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಹಿನ್ನೆಲೆ – ಗೊಬ್ಬರ ಕೊಡದಿರುವ ನಡ್ಡಾಗೆ ರಾಜೀನಾಮೆ‌ ಕೊಡಿಸಿ – ಬಿಜೆಪಿ ವಿರುದ್ಧ ಕೃಷಿ ಸಚಿವ ಕಿಡಿ

Comments are closed.