Asha workers: ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ -ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೇಂದ್ರ ಸಮ್ಮತಿ!

Share the Article

Asha workers: ರಾಜ್ಯದಲ್ಲಿ ಕಳೆದ ಕೆಲ ತಿಂಗಳಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (Asha Workers) ಹೋರಾಟ ಮಾಡುತ್ತಲೇ ಬಂದಿದ್ದು, ಇದೀಗ ಹೋರಾಟ ಫಲವಾಗಿ ನ್ಯೂಸ್ ವೊಂದು ಸಿಕ್ಕಿದೆ.

ಈ ಹಿಂದೆ ಆಶಾ ಕಾರ್ಯಕರ್ತೆಯಾರಿಗೆ ಮಾಸಿಕ 10 ಸಾವಿರ ರೂಪಾಯಿ ನಿಶ್ಚಿತ ವೇತನ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುಮಾರು 40 ಸಾವಿರ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯವ್ಯಾಪಿ ಹೋರಾಟ ನಡೆಸಿದ್ದರು.ಅಷ್ಟೇ ಅಲ್ಲದೆ ಆ.12 ರಿಂದ ಕೂಡ ಫ್ರೀಡಂ ಪಾರ್ಕ್ ನಲ್ಲಿ ಆಹೋ ರಾತ್ರಿ ಧರಣಿ ನಡೆಸುವುದಾಗಿ ಆಶಾ ಕಾರ್ಯಕರ್ತೆಯರ ಸಂಘಟನೆಗಳು ಎಚ್ಚರಿಕೆ ನೀಡಿದ್ದರು. ಅದರಂತೆ ಇದೀಗ ಪ್ರತಿಭಟನೆಗೆ ಮೂರು ದಿನ ಇರುವಾಗಲೇ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರ 5 ಸಾವಿರ ಖಚಿತ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದೆ. ಈ ಹಿಂದೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಅದರಂತೆ ಇದೀಗ 60:40 ರ ಅನುಪಾತದಲ್ಲಿ ರಾಜ್ಯಸರ್ಕಾರದ ಪಾಲುದಾರಿಕೆಯೊಂದಿಗೆ 1500 ಪ್ರೋತ್ಸಾಹಧನ ಹೆಚ್ಚಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಮೂಲಕ ಆಶಾ ಕಾರ್ಯಕರ್ತೆಯರ ಕನಿಷ್ಠ ಪ್ರೋತ್ಸಾಹಧನ 10 ಸಾವಿರ ದಾಟಲಿದ್ದು ಕಾರ್ಯಕರ್ತೆಯರು ನಡೆಸುವ ಕಾರ್ಯಗಳಿಗೆ ನೀಡುವ ಇನ್ಸೆಂಟಿವ್ ಲೆಕ್ಕ ಹಾಕಿದರೆ 12 ರಿಂದ 13 ಸಾವಿರದ ವರೆಗೆ ಆಶಾ ಕಾರ್ಯಕರ್ತೆಯರಿಗೆ ವೇತನ ದೊರೆಯಲಿದೆ.

ಇನ್ನು ಆಶಾ ಕಾರ್ಯಕರ್ತೆಯರ ಭೇಡಿಕೆಯಂತೆ ಇದೀಗ 60:40 ರ ಅನುಪಾತದಲ್ಲಿ ಸರ್ಕಾರ ವೇತನ ಹೆಚ್ಚು ಮಾಡಿದ್ದು, ಈ ಹಿನ್ನಲೆ ಆ 12 ರಂದು ಪ್ರತಿಭಟನೆ ಮಾಡುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇದನ್ನೂ ಓದಿ: Marriage: ಪರೀಕ್ಷೆ ಬರೆಯಲು ಹೋದವಳು ನಾಪತ್ತೆ ಪ್ರಕರಣ: ಪ್ರಿಯಕರನನ್ನು ಮದುವೆಯಾಗಿ ಪತ್ತೆ!

Comments are closed.