Election: ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ಮತ ಕಳ್ಳತನ ದಾಖಲೆ ಸುಳ್ಳಾದಲ್ಲಿ ರಾಜಕೀಯ ನಿವೃತ್ತಿ ನೀಡುತ್ತೇನೆಂದು ಪ್ರಿಯಾಂಕ್ ಖರ್ಗೆ ಸವಾಲು

Election: ಕಳೆದ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿಯವರ ಗಂಭೀರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ರಾಹುಲ್ ಬಿಡುಗಡೆಗೊಳಿಸಿರುವ ಆರೋಪ ಸುಳ್ಳಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲೆಸೆದಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ಐದು ರೀತಿಯಲ್ಲಿ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ ಹೀಗಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ನಾವು ಕೊಟ್ಟಿರುವ ದಾಖಲೆಗಳನ್ನು ಪರಿಶೀಲನೆ ಮಾಡದೇ ಚುನಾವಣಾ ಆಯೋಗ ಮತ್ತು ಬಿಜೆಪಿ ಸುಳ್ಳು ಎಂದು ಹೇಳುತ್ತಿದೆ. ನಾವು ಸಾವಿರಾರು ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ. ಅದನ್ನು ಪರಿಶೀಲನೆ ನಡೆಸುವುದನ್ನು ಬಿಟ್ಟು, ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿದರೆ ಹೇಗೆ? ನಾವು ಸತ್ಯ ಎಂದು ಹೇಳಿ ದಾಖಲೆ ಬಿಡುಗಡೆ ಮಾಡಿದ್ದೇವಲ್ಲ. ಸುಳ್ಳು ಎಂದು ನೀವು ಸಾಬೀತು ಮಾಡಿ ಬಿಜೆಪಿ ಮತ್ತು ಜೆಡಿಎಸ್ ಸುಳ್ಳು ಎಂದು ಸಾಬೀತು ಮಾಡಿದಲ್ಲಿ ಆಗ ನಾನೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಇದನ್ನೂ ಓದಿ: Dharmasthala: ಧರ್ಮಸ್ಥಳ:
ಯೂಟ್ಯೂಬರ್ ಹಲ್ಲೆ ಪ್ರಕರಣ: ಸೋಮನಾಥ ಸಪಲ್ಯ ಬಂಧನ!
Comments are closed.