

B L Santosh : ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿರುವ ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ನಾಯಕರು ಮೌನ ಮುರಿಯುತ್ತಿದ್ದಾರೆ. ಧರ್ಮಸ್ಥಳದ ಪರವಹಿಸಿ ಹೇಳಿಕೆ ನೀಡುವುದರೊಂದಿಗೆ ಅನೇಕ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕ, ಮೋಸ್ಟ್ ಪವರ್ ಫುಲ್ ಲೀಡರ್ ಬಿ ಎಲ್ ಸಂತೋಷ್ ಅವರು ಧರ್ಮಸ್ಥಳ ಪ್ರಕರಣದ ಕುರಿತು ಅಚ್ಚರಿಯ ಪೋಸ್ಟ್ ಹಂಚಿಕೊಂಡಿದ್ದಾರೆ
ಹೌದು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಫೋಸ್ಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, “ಎಚ್ಚೆತ್ತುಕೊಳ್ಳೋಣ, ಶಬರಿಮಲೈ, ಶನಿಸಿಂಗ್ಲಾಪುರ, ಈಶಾ ಈಗ ಧರ್ಮಸ್ಥಳ” ಎಂದು ಫೋಸ್ಟ್ ಮಾಡಿದ್ದಾರೆ.
ಇನ್ನೂ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆ ಹಾಗೂ ಇತ್ತೀಚೆಗಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಖಂಡನೆ ವ್ಯಕ್ತಪಡಿಸಿದೆ. 2012ರಲ್ಲಿ ನಡೆದ ಕುಮಾರಿ ಸೌಜನ್ಯ ಹತ್ಯೆಯ ಆರೋಪಿಗಳಿಗೆ ಶಿಕ್ಷೆ ಆಗಬೇಕು. ಆ ಸಂಬಂಧ ನಡೆದ ಎಲ್ಲಾ ಪ್ರತಿಭಟನೆಗಳಲ್ಲಿ ವಿಶ್ವಹಿಂದೂ ಪರಿಷತ್ ಭಾಗವಹಿಸಿದೆ. ಆದರೆ ಇದೀಗ ಆಗಂತುಕ ವ್ಯಕ್ತಿಯೋರ್ವ ತಾನು 10-20 ವರ್ಷದ ಹಿಂದೆ ನೂರಾರು ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ. ಈ ಹೇಳಿಕೆ ಆಧರಿಸಿ ಕ್ಷೇತ್ರದ ಘನತೆಗೆ ಚ್ಯುತಿ ತರುವ ಸಂಚು ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
https://hosakannada.com/2025/08/09/belthangady-young-tulu-playwright-narayana-succumbs-to-dengue/













