PM Modi: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ – ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿ!!

PM Modi : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿದ್ದು ಅಂತಿಮವಾಗಿ ಪ್ರವಾಸದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಗಿದ್ರೆ ನಾಳೆ ಯಾವೆಲ್ಲ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ?

ಬೆಳಗ್ಗೆ 10.55ಕ್ಕೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಎಚ್‌ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ವೃತ್ತದ ಬಳಿಯಿರುವ ಎಚ್‌ಕ್ಯುಟಿಸಿ ಕೇಂದ್ರಕ್ಕೆ ಬರಲಿದ್ದಾರೆ. ಅವರು ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಬಳಿಕ ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು-ಬೆಳಗಾವಿ ಮಾರ್ಗದ್ದೂ ಸೇರಿ ಒಟ್ಟು ದೇಶದಲ್ಲಿ ಹೊಸ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ 11.30ಕ್ಕೆ ರೇಲ್ವೆ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಲಿರುವ ಮೋದಿ ಅವರು 11.45ಕ್ಕೆ ಆರ್.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ನೂತನ ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಅದೇ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲಿದ್ದಾರೆ.
12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ಸುಮಾರು ಒಂದು ಗಂಟೆ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ದೆಹಲಿಗೆ ವಾಪಸಾಗಲಿದ್ದಾರೆ.
B L Santosh : ಧರ್ಮಸ್ಥಳ ಪ್ರಕರಣ- ಬಿಜೆಪಿ ಮುಖಂಡ B L ಸಂತೋಷ್ ಅಚ್ಚರಿ ಪೋಸ್ಟ್
Comments are closed.