Kolluru: ಸೌಪರ್ಣಿಕಾ ನದಿಯಲ್ಲಿ ಯುವಕ ಮೃತಪಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಇಬ್ಬರ ವಿರುದ್ಧ ಪ್ರಕರಣ ದಾಖಲು

Kolluru: ಕೊಲ್ಲೂರಿನ (Kolluru) ಸೌಪರ್ಣಿಕಾ ನದಿಯಲ್ಲಿ ನಟೇಶ್ (36) ಆ.7ರಂದು ಸಂಪ್ರೆಯ ಸೌಪರ್ಣಿಕಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರ ನದಿಯ ದಡದಲ್ಲಿ ನಿಲ್ಲಿಸಿದ್ದ ನಟೇಶ್ ಅವರ ಕಾರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಆ.8 ರಂದು ಬೆಳಗ್ಗೆ ಮನೆಮಂದಿ ನಟೇಶ್ ರ ಕಾರಿನ ಒಳಗೆ ಪರಿಶೀಲಿಸಿದಾಗ ನಟೇಶ್ ಬಳಸುತ್ತಿದ್ದ ಮೊಬೈಲ್ ಮತ್ತು ಅದರ ಜೊತೆಗೆ ಒಂದು ಚೀಟಿ ಲಭಿಸಿದೆ. ಆ ಚೀಟಿಯಲ್ಲಿ ತನ್ನ ಸಾವಿನ ರಹಸ್ಯ ಮೊಬೈಲ್ ಗ್ಯಾಲರಿಯಲ್ಲಿದೆ ಎಂದು ಬರೆದು ಮೊಬೈಲ್ ಪಾಸ್ ವರ್ಡ್ ಅನ್ನು ಕೂಡಾ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೊಬೈಲ್ ಅನ್ನು ಪರಿಶೀಲಿಸಿದಾಗ ಸಂತು ಮತ್ತು ನಾಗೇಶ ಯಾನೆ ದಳಿ ನಾಗ ಎಂಬವರು ತನ್ನ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದು, ಇದರಿಂದ ಮನನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಟೇಶ್ ಮಾಡಿರುವ ವೀಡಿಯೊ ಪತ್ತೆಯಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಂತು ಯಾನೆ ಸಂತೋಷ್ ಮತ್ತು ದಳಿ ನಾಗ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Comments are closed.