Akka Pade: ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಲಕ್ಷ್ಮಿ ಹೆಬ್ಬಾಳ್ಕರ್

Akka Pade: ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ (Women’s Safety) ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ (Akka Pade) ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಹೇಳಿದರು.
ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಮಾಹಿತಿ ನೀಡಿದರು.
Shabarimala: ಶಬರಿಮಲೆ ಯಾತ್ರೆಗೆ ಸರ್ಕಾರದಿಂದ ಮಾನ್ಯತೆ ನೀಡಿದ ಶ್ರೀಲಂಕಾ!
Comments are closed.