Karnataka Gvt: ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ DJ ಬಳಕೆ ನಿಷೇಧ – ಸರ್ಕಾರದಿಂದ ಖಡಕ್ ಆದೇಶ!!

Karnataka Gvt: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಹೌದು, ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.
ಗಣೇಶ ಕೂರಿಸಲು ಮಾರ್ಗಸೂಚಿಗಳೇನು?
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ
ಚಪ್ಪರ, ಶಾಮಿಯಾನ, ಪೆಂಡಾಲ್ ಗೆ ವಿಶೇಷ ಅನುಮತಿ ಪಡೆಯಬೇಕು.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಅಹಿಕತರ ಘಟನೆ ನಡೆದರೆ ಅದಕ್ಕೆ ಸಂಘಟಕರೇ ಹೊಣೆ.
ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಿಸಬೇಕು.
ಗಣೇಶ ಕೂರಿಸುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು.
ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ NOC ಕಡ್ಡಾಯ.
ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ ನೀಡಲಾಗಿದೆ.
ಯಾವುದೇ ಕಾರಣಕ್ಕೂ ಡಿಜೆ (DJ) ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ.
ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧಿಸಲಾಗಿದೆ.
Dharmasthala : ಧರ್ಮಸ್ಥಳ ಪ್ರಕರಣ- SIT ತಂಡದ ದಿನದ ಖರ್ಚು ಎಷ್ಟು ಗೊತ್ತಾ?
Comments are closed.