Yatnal case: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ – ಯತ್ನಾಳ್ ವಿರುದ್ಧ ಎಫ್‌ಐಆರ್

Yatnal case: ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ ಖಮರ್ ಜುನೈದ್ ಖುರೇಷಿ ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೇ ಆ.11ರಂದು ಕೊಪ್ಪಳದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ʼಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ ರು.ಗಳ ನಗದು ಪ್ರೋತ್ಸಾಹ ಧನ ನೀಡಲಾಗುವುದುʼ ಎಂದು ಸಾರ್ವಜನಿಕವಾಗಿ ಘೋಷಣೆ ಮಾಡಿರುವ ಹೇಳಿಕೆಯು ಒಂದು ಸಮುದಾಯವನ್ನು ಗುರಿಯಾಗಿಸಿ ಪ್ರಚೋದಿಸುವ ಕೆಲಸ, ಆದ್ದರಿಂದ ಯತ್ನಾಳ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು.
ಈ ದೂರಿನನ್ವಯ ಕಲಬುರಗಿ ನಗರದ ವ್ಯಾಪ್ತಿಯ ರೋಝಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 196, 299, 353(1)(c),353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.