Actor Darshan: ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್!

Actor Darshan: ರೇಣುಕಾಸ್ವಾಮಿ ಕೇಸ್‌ಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲರಿಗೂ ನಾನು ಹೇಳುವುದೇನೆಂದರೆ ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ಎಲ್ಲರಿಗೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.
Renukaswamy Father: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಮನವಿ!
Comments are closed.