Asha Protest: ಸರ್ಕಾರದ ವಿರುದ್ದ ಸಿಡಿದೆದ್ದ ಆಶಾ ಕಾರ್ಯಕರ್ತೆಯರು – ಮೂರನೇ ದಿನಕ್ಕೆ ಕಾಲಿಟ್ಟ ಬೃಹತ್ ಪ್ರತಿಭಟನೆ

Share the Article

Asha Protest: ಒಂದು ಕಡೆ ಸದನ. ಮತ್ತೊಂದು ಕಡೆ ಗದ್ದಲ. ರಾಜ್ಯದ ನೂರಾರು ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ದ ಸಿಡಿದೆದ್ದಿದ್ದಾರೆ. ಅವರ ಬೃಹತ್ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮೂರು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ‌ಲ್ಲಿ ಕೂಡ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಹಮ್ಮಿಕೋಮಡಿದ್ದಾರೆ. ಮೂರು ದಿನಗಳ ಹೋರಾಟವನ್ನು ಕಾರ್ಯಕರ್ತೆಯನ್ನು ನಿಗಧಿಪಡಿಸಿದ್ದರು. ಇಂದಿಗೆ ಪ್ರತಿಭಟನೆ ಕೊನೆಗೊಳ್ಳುತ್ತೆ. ಆದರೆ ಒಂದು ವೇಳೆ ಸರ್ಕಾರ ಇವರ ಬೇಡಿಕೆಗಳ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ನಡೆ ಏನು ಅನ್ನೋದು ಸಂಜೆಯ ನಂತರವಷ್ಟೆ ತಿಳಿಯಬೇಕಷ್ಟೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳೇನು?

– ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ & ಕೇಂದ್ರದ ಭಾಗಶಃ ಗೌರವಧನ ಸೇರಿಸಿ ಮಾಸಿಕ ರೂ.10,000 ಗೌರವಧನ ಈ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು

– 2025 ಮುಖ್ಯಮಂತ್ರಿ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1,000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು

– ಜನಸಂಖ್ಯೆ ಹೆಚ್ಚಿಸಿ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು

– ಅವೈಜ್ಞಾನಿಕ ಆಶಾ ಪರ್ಫಾಮೆನ್ಸ್ ಆಪ್ರೈಸಲ್ ಕೈಬಿಡಬೇಕು

– ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು

– ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು

– 2025ರಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಆಶಾ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು

Actor Darshan: ದರ್ಶನ್ ಬೇಲ್ ರದ್ದು ಬಗ್ಗೆ ನಟಿ ರಮ್ಯಾ ಪೋಸ್ಟ್!

Comments are closed.