Home News Plastic Ban: ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ನಿಷೇಧ: ನಾಳೆಯಿಂದಲೇ ಜಾರಿ – ರಾಮಲಿಂಗಾ...

Plastic Ban: ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲಾಸ್ಟಿಕ್ ನಿಷೇಧ: ನಾಳೆಯಿಂದಲೇ ಜಾರಿ – ರಾಮಲಿಂಗಾ ರೆಡ್ಡಿ

Hindu neighbor gifts plot of land

Hindu neighbour gifts land to Muslim journalist

Plastic Ban: ಮುಜರಾಯಿ ದೇವಾಲಯಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಹಾಗೂ ನೀರಿನ ಪ್ಲಾಸ್ಟಿಕ್ ಬಾಟಲಿಗೂ ನಿರ್ಬಂಧ ಹೇರಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಹೊರಡಿಸಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿ ಎಲ್ಲ ಬಗೆಯ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ ಹೊರಬಿದ್ದಿದೆ.

ಆಗಷ್ಟ್ 15ರಿಂದ ಕಡ್ಡಾಯವಾಗಿ ಜಾರಿಗೆ ಬರುವಂತೆ ಆದೇಶ ಮಾಡಲಾಗಿದ್ದು, ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನ ಬಳಸಿದಲ್ಲಿ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಈ ಆದೇಶ ಖಾಸಗಿ ದೇವಾಲಯಗಳಿಗೆ ಅನ್ವಯವಾಗುವುದಿಲ್ಲ.

ರಾಜ್ಯದಲ್ಲಿರುವ ಅಧಿಸೂಚಿತ/ಘೋಷಿತ ದೇವಾಲಯ/ಸಂಸ್ಥೆಗಳ ಒಳಗೆ ಮತ್ತು ಹೊರಗೆ ಪರಿಸರ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಲಾಗಿದ್ದು, ದೇವಸ್ಥಾನದ ಪರಿಸರ ಸ್ವಚ್ಛತೆಗೆ ರಾಜ್ಯದ 25 ದೇಗುಲಗಳಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಉದ್ದೇಶಿಸಲಾಗಿದೆ.

ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳ ಛತ್ರಗಳಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಸಂಬಂಧ ಯೋಜನಾ ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗುವುದುಎಂದು ಸಚಿವರು ಹೇಳಿದ್ದಾರೆ.

ತಜ್ಞರ ತಂಡದಿಂದ ಮೊದಲ ಹಂತದಲ್ಲಿ ಇಲಾಖೆಗೆ ಸೇರಿದ 25 ದೇವಾಲಯಗಳನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಅಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕ ಸ್ಥಾಪಿಸಲು ಸ್ಥಳ ಗುರುತಿಸಿ ತ್ಯಾಜ್ಯ ವಿಲೇವಾರಿಯನ್ನು ನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗುವುದೆಂದು ಸಚಿವರು ತಿಳಿಸಿದ್ದಾರೆ.

Weight Loss: ದೇಹದ ತೂಕವನ್ನು ಕಡಿಮೆ ಮಾಡಬೇಕೇ? ತೊಗರಿ, ಕಡಲೆ, ಹೆಸರುಕಾಳಿಗಿಂತಲೂ ಈ ಧಾನ್ಯ ಉತ್ತಮ