Weather Repoprt: ಕರ್ನಾಟಕ ಹವಾಮಾನ ಮುನ್ಸೂಚನೆ: ಆಗಸ್ಟ್ 20ರ ತನಕವೂ ಬಿಟ್ಟು ಬಿಟ್ಟು ಮಳೆ ಸಾಧ್ಯತೆ

Share the Article

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕವೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಆಗಸ್ಟ್ 19ರ ತನಕವೂ ಮಳೆಯ ಮುನ್ಸೂಚೆನೆ ಇದೆ. 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೀದರ್ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಆಗಸ್ಟ್ 20ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 19ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಆಗಸ್ಟ್ 19 ಹಾಗೂ 20ರಂದು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು ಪ್ರಭಲಗೊಂಡು ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಗಿ ಆಗಸ್ಟ್ 22,23ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.

Dharmasthala Case: ಧರ್ಮಸ್ಥಳದಲ್ಲಿ ಎಸ್ಐಟಿ ಕಾರ್ಯಾಚರಣೆ ಕಾನೂನು ಪ್ರಕ್ರಿಯೆ – ಬಿಜೆಪಿ ರಾಜಕಾರಣ ಸರಿಯಲ್ಲ – ಸಚಿವ ಬೋಸ್ ರಾಜ್

Comments are closed.