Cylinder Blast: ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ; ಬಾಲಕ ಸಾವು, 7 ಜನರಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Cylinder Blast: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಶುಕ್ರವಾರ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮುಬಾರಕ್ ಎಂಬ 8 ವರ್ಷದ ಬಾಲಕ ಘಟನೆಯಲ್ಲಿ ಮೃತಪಟ್ಟಿದ್ದಾನೆ. 7 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಹೇಳಿದೆ. ಸ್ಥಳಕ್ಕೆ ಡಿಸಿಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈವರೆಗೆ 12 ಮಂದಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ ಮುಂಜಾನೆ ಇದ್ದಕ್ಕಿದ್ದಂತೆಯೇ ನಗರದಲ್ಲಿ ಸ್ಪೋಟದ ಸದ್ದು ಕೇಳಿಸಿತ್ತು. ಸಿಲಿಂಡರ್ ಸ್ಪೋಟದಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸುಮಾರು 40 ಮಂದಿ ವಾಸವಾಗಿದ್ದ ಮನೆಯಲ್ಲಿ ಈ ಘಟನೆ ನಡೆದಿದ್ದು, ಎಲ್ಲರೂ ಕೆಲಸಕ್ಕಾಗಿ ಹೊರಗೆ ಹೋಗಿದ್ದರು. ಕೇವಲ 10-15 ಮಂದಿ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಸ್ಪೋಟದಲ್ಲಿ ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಮಹಿಳೆ ಪ್ರಾಣಾಪಾಯದಿಂದ ಬಚಾವಾಗಿದ್ದಾಳೆನ್ನಲಾಗಿದೆ. ಮೃತ ಬಾಲಕನ ಸೋದರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ನೀಡಿದ್ದಾನೆ.
ತನ್ನ ಕಿರಿಯ ಸೋದರ ಮೃತಪಟ್ಟಿದ್ದಕ್ಕಾಗಿ ಕಣ್ಣೀರು ಸುರಿಸಿದ್ದಾನೆ. ಬಾಲಕನ ತಾಯಿಗೂ ಸಹ ತಲೆಗೆ ಪೆಟ್ಟು ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೂರು ಮನೆಗಳು ಸ್ಫೋಟದಲ್ಲಿ ಸಂಪೂರ್ಣವಾಗಿ ಛಿದ್ರಛಿದ್ರವಾಗಿ ಹೋಗಿವೆ. ಸ್ಪೋಟದ ತೀವ್ರತೆಯಿಂದಾಗಿ ಇಡೀ ಪ್ರದೇಶದ ಒಂದು ಕಿಮೀ ವ್ಯಾಪ್ತಿಯರವರೆಗೂ ಸದ್ದು ಕೇಳಿಬಂದಿದೆ.
ಆಡಗೋಡಿ ಠಾಣೆಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಂಕಿಯು ಹತೋಟಿಗೆ ಬಂದಿದ್ದು, ಮಜನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
PM Modi: ಸತತ 12 ಸ್ವಾತಂತ್ರ್ಯ ದಿನಾಚರಣೆ ಭಾಷಣ – ಇಂದಿರಾ ಗಾಂಧಿಯವರ ದಾಖಲೆ ಮುರಿದ ಪ್ರಧಾನಿ ಮೋದಿ
Comments are closed.