Bengaluru : ವಿಲ್ಸನ್ ಗಾರ್ಡ್‌ನ್ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್- ಸ್ಪೋಟಗೊಂಡಿದ್ದು ಸಿಲಿಂಡರ್ ಅಲ್ಲ, ಹಾಗಿದ್ರೆ ಮತ್ತೇನು?

Share the Article

Bengaluru : ಇಂದು ಬೆಳಗ್ಗೆ ವಿಲ್ಸನ್‌ ಗಾರ್ಡ್‌ನಲ್ಲಿ ಬರುವ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ವರ್ಷದ ಓರ್ವ ಬಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ಪೋಟಗೊಂಡದ್ದು ಸಿಲಿಂಡರ್ ಅಲ್ಲ, ಫ್ರಿಡ್ಜ್ ಎಂಬುದು ಬಯಲಾಗಿದೆ.

ಹೌದು, ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಹೇಳಲಾಗಿತ್ತು. ಆದರೆ ಮನೆಯ ಸಿಲಿಂಡರ್‌ಗೆ ಯಾವುದೇ ಹಾನಿಯಾಗಿಲ್ಲ. ಈ ಸಿಲಿಂಡರ್ ಸ್ಫೋಟಗೊಂಡಿಲ್ಲ. ಹೀಗಾಗಿ ಹಲವು ಅನುಮಾನಗಳು ವ್ಯಕ್ತವಾಗಿತ್ತು. ಸ್ಫೋಟದ ತೀವ್ರತೆ ಹೆಚ್ಚಾಗಿದ್ದ ಕಾರಣ ಪೊಲೀಸರು ತನಿಖೆ ಚುರಕುಗೊಳಿಸಿದ್ದರು. ಇತ್ತ ಎಸ್‌ಡಿಆರ್‌ಎಫ್ ಕಾರ್ಯಾಚರಣೆ ವೇಳೆ ಸ್ಫೋಟದ ಕಾರಣ ಬಹಿರಂಗವಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಅನ್ನೋದು ಬಯಲಾಗಿದೆ.

ಇನ್ನು ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ. ಈ ಮಾಹಿತಿ ಬಯಲಾಗುತ್ತಿದ್ದಂತೆ ಎಸ್‌ಡಿಆರ್‌ಎಫ್ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಈ ಮಾಹಿತಿ ಖಚಿತವಾಗುತ್ತಿದ್ದಂತೆ SDRF ಕಾರ್ಯಾಚರಣೆ ಸ್ಥಗಿತಗೊಳಿಸಿದೆ.

Comments are closed.