Atal Bihari Vajpayee: ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: ಗಣ್ಯರಿಂದ ಗೌರವ ಸಮರ್ಪಣೆ

Share the Article

Atal Bihari Vajpayee: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ ಪುಣ್ಯತಿಥಿ ಪ್ರಯುಕ್ತ ದೇಶಾದ್ಯಂತ `ಸದೈವ ಅಟಲ್’ (Sadaiv Atal) ಕಾರ್ಯಕ್ರಮದಡಿ ಗೌರವ ಸಲ್ಲಿಸಲಾಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೇರಿದಂತೆ ಹಲವು ಗಣ್ಯರು ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಪ್ರಧಾನಿ ಮೋದಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿದ್ದು, ವಾಜಪೇಯಿ ಅವರ ಆದರ್ಶಗಳು ಭಾರತದ ಪ್ರಗತಿಯ ದಾರಿದೀಪವಾಗಿವೆ. ಅವರ ನಾಯಕತ್ವದಲ್ಲಿ ದೇಶ ಆರ್ಥಿಕ, ರಕ್ಷಣೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ಇಟ್ಟಿತು ಎಂದು ಹೇಳಿದರು.

Arrest: ಬಸ್‌ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; ಆರೋಪಿ ವಶಕ್ಕೆ!

Comments are closed.