Udupi: ಇಂದು ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ಇಲ್ಲ!! ಕಾರಣ ಏನು?

Udupi: ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ದೇಶದಲ್ಲೇ ಪ್ರಸಿದ್ಧ.ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಇಂದು ಕೃಷ್ಣ ಜನ್ಮಾಷ್ಟಮಿ ಉಡುಪಿ ಮಠದಲ್ಲಿ ಇಲ್ಲ.

ಹೌದು, ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ. ಕಾರಣ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.
ದೇಶದ ಬೇರೆ ಬೇರೆ ಕಡೆಗಳಲ್ಲಿ ಚಾಂದ್ರಮಾನ ಪದ್ಧತಿಯಂತೆ ಕೃಷ್ಣಾಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯಂತೆ ಕೃಷ್ಣಾಷ್ಟಮಿ ಆಚರಣೆ ಮಾಡಲಾಗುತ್ತದೆ. ಇದೇ ಕಾರಣಕ್ಕೆ ಈ ಭಿನ್ನತೆ ಕಾಣಬಹುದಾಗಿದೆ. ಹುಣ್ಣಿಮೆ-ಅಮಾವಾಸ್ಯೆಯ ಹಾಗೂ ರೋಹಿಣಿ ನಕ್ಷತ್ರದ ಆಧಾರದ ಗಣನೆಯಲ್ಲಿ ಇತರ ಆಚರಣೆ ನಡೆಯುತ್ತಿದ್ದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ.
ಆದರೆ, ಚಾಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರಧಾನ ಹಾಗೂ ಇತರ ಆಚರಣೆಗಳು ನಡೆಯಲಿವೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಠದ ದಿವಾನರಾದ ಪ್ರಸನ್ನ ಆಚಾರ್ಯ ಅವರು, ಈ ಬಾರಿ ನಾವು ಚಂದ್ರ ಕೃಷ್ಣ ಜನ್ಮಾಷ್ಟಮಿ ಮತ್ತ ಸೌರಕೃಷ್ಣ ಜನ್ಮಾಷ್ಟಮಿಯನ್ನು ಅಂತ ಎರಡು ಪದ್ಧತಿಗಳಲ್ಲಿ ಈ ಬಾರಿ ಕೃಷ್ಣಜನ್ಮಾಷ್ಟಮಿಯನ್ನು ಆಚರಣೆ ಮಾಡುತ್ತಿದ್ದೇವೆ. ಇದು ಎರಡ್ಮೂರು ವರ್ಷಗಳಿಗೆ ಒಮ್ಮೆ ಬರುವ ವಿಶೇಷ ಸಂಗತಿಯಾಗಿದೆ. ಉಡುಪಿ ಮತ್ತು ಕರಾವಳಿ ಭಾಗದ ಎಲ್ಲಾ ಹಬ್ಬ ಹರಿದಿನಗಳು ಸೌರ ಕೃಷ್ಣಜನ್ಮಾಷ್ಟಮಿ ರೀತಿಯಲ್ಲಿ ಸಾಮಾನ್ಯವಾಗಿ ನಡೆಯುತ್ತವೆ ಎಂದು ತಿಳಿಸಿದ್ದಾರೆ.
Health Tips: ಹೃದ್ರೋಗ ಇರುವವರು ದಿನಕ್ಕೆ ಎಷ್ಟು ನೀರು ಕುಡಿಯುವ ಅಗತ್ಯವಿದೆ? – ತಜ್ಞ ವೈದ್ಯರು ಹೇಳುತ್ತಾರೆ?
Comments are closed.