Dharmasthala : ಧರ್ಮಸ್ಥಳ ವಿರುದ್ಧ ಷಡ್ಯಂತ್ರ ವಿಚಾರಕ್ಕೆ ಟ್ವಿಸ್ಟ್ – ನಾಡಿದ್ದು ಸದನದಲ್ಲಿ ಪರಮೇಶ್ವರ್ ಸತ್ಯಅಂಶ ಅನಾವರಣ!!

Share the Article

Dharmasthala : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ ಇದೊಂದು ಷಡ್ಯಂತರ ಎಂದು ತಿಳಿಸಿದ್ದಾರೆ. ಅಲ್ಲದೆ ಈ ಕುರಿತಂತೆ ನಾಡಿದ್ದು ಸೋಮವಾರ ಗೃಹ ಮಂತ್ರಿ ಪರಮೇಶ್ವರವರು ಸತ್ಯದ ಬಗ್ಗೆ ಸದನಕ್ಕೆ ತಿಳಿಸಲಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಹೌದು, ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ ಸೋಮವಾರ ಸದನದಲ್ಲಿ ವಿವರಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈಗಾಗಲೇ ಎಸ್ಐಟಿ ತಂಡವು ಗೃಹ ಸಚಿವರನ್ನು ಭೇಟಿ ಮಾಡಿ ಮಾಹಿತಿಗಳನ್ನು ಹಂಚಿಕೊಂಡಿದೆ. ಈ ನಡುವೆ ಡಿಕೆ ಶಿವಕುಮಾರ್ ಅವರು ಈ ರೀತಿಯ ಹೇಳಿಕೆ ನೀಡಿರುವುದು ಬಾರಿ ಕುತೂಹಲವನ್ನು ಕೆರಳಿಸಿದೆ.

ಅಲ್ಲದೆ ಸುಳ್ಳು ಆರೋಪ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ನಾವು ನಡೆಯುತ್ತಿದ್ದು, ಕಾನೂನು ಎಲ್ಲರಿಗೂ ಒಂದೇ. ನಾವು ಅದನ್ನು ಕಾಪಾಡಬೇಕು. ಇಲ್ಲಿ ನಾವು ಯಾರನ್ನೂ ರಕ್ಷಿಸುವುದಿಲ್ಲ. ಅನಗತ್ಯವಾಗಿ ಯಾರ ತೇಜೋವಧೆಯೂ ಮಾಡುವಂತಿಲ್ಲ ಎಂದರು.

Comments are closed.