Dharmasthala Case: ಧರ್ಮಸ್ಥಳ ತಲೆಬುರುಡೆ ಪ್ರಕರಣ: ಸ್ಪೀಕರ್ ಭೇಟಿಯಾದ ಗೃಹ ಸಚಿವ ಪರಮೇಶ್ವರ್

Dharmasthala Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್‌ಮ್ಯಾನ್ ನೀಡಿದ ದೂರಿನನ್ವಯ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಇಂದು ಸದನದಲ್ಲಿ ಗೃಹಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹಸಚಿವ ಪರಮೇಶ್ವರ್ ವಿಧಾನಸೌಧದಲ್ಲಿ ಸ್ಪೀಕರ್ ಯು ಟಿ ಖಾದರ್ ಅವರನ್ನು ಭೇಟಿಯಾಗಿದ್ದು ಚರ್ಚೆ ಮಾಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಗೃಹ ಸಚಿವ ಪರಮೇಶ್ವರ್ ಭೇಟಿಯಾಗಿದ್ದಾರೆ.
ನಂತರ ಧರ್ಮಸ್ಥಳ ಪ್ರಕರಣ ಕುರಿತು ಎಸ್‌ಐಟಿ ತನಿಖೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಉತ್ತರ ನೀಡಲಿದ್ದಾರೆ. ಈಗಾಗಲೇ ವಿಪಕ್ಷ ನಾಯಕರು ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಬಯಲು ಮಾಡಬೇಕು, ಮುಸುಕುಧಾರಿಯ ಹೆಸರು ಬಹಿರಂಗಪಡಿಸಬೇಕು, ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.
ಹೀಗಾಗಿ ಸದನಲದಲಿ ಗೃಹ ಸಚಿವ ಪರಮೇಶ್ವರ್ ಅವರು ಏನು ಉತ್ತರ ನೀಡಲಿದ್ದಾರೆ ಎಂದು ಕಾದು ನೋಡಬೇಕಿದೆ.
FIR: ʼದಿಯಾʼ ಚಿತ್ರ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು
Comments are closed.