Weather Report: ಬಂಗಾಳಕೊಲ್ಲಿಯ ವಾಯುಭಾರ ಕುಸಿತ – ಮಹಾರಾಷ್ಟ್ರ, ಗುಜರಾತ್‌ನಲ್ಲಿ ಭಾರಿ ಮಳೆ – ರಾಜ್ಯದಲ್ಲಿ ಹೇಗಿದೆ?

Share the Article

Weather Report: ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಂಜೆ ಹಾಗೂ ರಾತ್ರಿ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 19ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ 21ರಿಂದ ಕಡಿಮೆಯಾಗಬಹುದು.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 19ರಿಂದ ಮಳೆ ಕಡಿಮೆ ಇರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಜಿಲ್ಲೆಗಳ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು.

ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರಿಂದ ಮತ್ತು ಉತ್ತರ ಒಳನಾಡಿನಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್ ತಲುಪಲಿದೆ. ಆಗಸ್ಟ್ 18ರಿಂದ 20ರ ತನಕ ಉತ್ತರ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಮುಂಬೈ ಸುತ್ತಮುತ್ತ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. 21ರಂದು ಗುಜರಾತ್ ನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

Comments are closed.