School Holiday: ಅಬ್ಬರಿಸಿದ ಮಳೆ: ಆರು ಜಿಲ್ಲೆಗಳಲ್ಲಿಂದು ಶಾಲೆ, ಕಾಲೇಜುಗಳಿಗೆ ರಜೆ

Share the Article

School Colleges Holiday: ಹಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮುಂಗಾರು ಮಳೆ ಇಂದು ಮತ್ತೆ ಜೋರಾಗಿ ಅಬ್ಬರಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು, ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆರು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಯ 11 ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ, ಹಳಿಯಾಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಕಾರಣ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಆದೇಶ ಹೊರಡಿಸಲಾಗಿದೆ.

ಕೊಡಗಿನಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಿದ್ದು, ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡಾ ಧಾರಾಕಾರ ಮಳೆಯಾಗುತ್ತಿದ್ದು,ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ, ಹೋಬಳಿ ವ್ಯಾಪ್ತಿಯಲ್ಲಿ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧೀಕಾರಿ ಹೆಚ್‌.ವಿ.ದರ್ಶನ್‌ ಆದೇಶಿಸಿದ್ದಾರೆ.

Comments are closed.