Dharmasthala Case: ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದೆ ಕಾಂಗ್ರೆಸ್ ಸಂಸದರು ಇದ್ದಾರೆ

Dharmasthala Case: ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದೆ ಕಾಂಗ್ರೆಸ್ ಸಂಸದರು ಇದ್ದಾರೆ. ತಮಿಳುನಾಡಿನ ಕಾಂಗ್ರೆಸ್ ಸಂಸದ ಸೆಂಥಿಲ್ ಇದರ ಹಿಂದಿರುವ ಮಾಸ್ಟರ್ ಮೈಂಡ್ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಜನಾರ್ಧನ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

ತಮಿಳುನಾಡಿನ ಸೆಂಥಿಲ್ ಇಡೀ ಪ್ರಕರಣಕ್ಕೆ ಬೇಕಾದ ರೂಪರೇಷೆಗಳನ್ನು ಸಿದ್ಧಪಡಿಸಿದ್ದಾರೆ. ಕೆಟ್ಟ ಹೆಸರು ತರುವ ಪ್ರಯತ್ನ ಮಾಡಿದ್ದಾರೆ. ಹೈಕಮಾಂಡ್ ಮೂಲಕ ಒತ್ತಾಯ ತಂದು ಎಸ್ಐಟಿ ಮಾಡಿಸುವ ಪ್ರಯತ್ನ ಮಾಡಿದ್ದಾರೆ. ಸಿಎಂ ಮತ್ತು ಡಿಸಿಎಂ ಗೆ ಇದರಲ್ಲಿ ಆಸಕ್ತಿ ಇರಲಿಲ್ಲ. ಸೆಂಥಿಲ್ ಮತ್ತು ದಕ್ಷಿಣ ಕನ್ನಡದ ಇಬ್ಬರು ಸೇರಿ ಕಾರ್ಯ ಸೂಚಿಗಳನ್ನು ಸಿದ್ಧಪಡಿಸಿದವರು. ಇದರ ಹಿಂದಿರುವ ಮಾಸ್ಟರ್ ಮೈಂಡ್ ಸೆಂಥೀಲ್ ಎಂದು ಆರೋಪ ಮಾಡಿದ್ದಾರೆ.
ನಮ್ಮ ರಾಜ್ಯದಲ್ಲಿ ಕೆಲಸ ಮಾಡಿರುವ ಸೆಂಥೀಲ್ ಎಡಪಂಥೀಯ ನಿಲುವುಗಳನ್ನು ಹೊಂದಿರುವವರು. ಸೆಂಥೀಲ್ ರನ್ನು ವಿಚಾರಣೆಗೆ ಒಳಪಡಿಸಬೇಕು. ಹೈಕೋರ್ಟ್ ಇಲ್ಲವೇ ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು. ಅಥವಾ ಸಿಬಿಐ ಮೂಲಕ ತನಿಖೆ ಮಾಡುವ ಅಗತ್ಯ ಇದೆ ಎಂದು ಕೇಂದ್ರ ಸರ್ಕಾರವನ್ನು ಜನಾರ್ಧನ್ ರೆಡ್ಡಿ ಒತ್ತಾಯಿಸಿದ್ದಾರೆ.
Comments are closed.