Accident: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಸ್ಥಳದಲ್ಲೇ ಇಬ್ಬರು ಸಾವು, 6 ಜನರಿಗೆ ಗಂಭೀರ ಗಾಯ

Share the Article

Accident: ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕು ಮೊಟೇಬೆನ್ನೂರು ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಹಿನ್ನೆಲೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್‌ 29 ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅರ್ನವಿ( 11 ವರ್ಷ) ಎಂಬ ಬಾಲಕಿ ಹಾಗೂ ಯಶ್ ಎಂಬ ಸುಮಾರು 20 ವರ್ಷದ ಯುವಕ ಸಾವನ್ನಪ್ಪಿದ ದುರದೈವಿಗಳು. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಬಸ್ ಹೊರಟಿತ್ತು ಎಂಬ ಮಾಹಿತಿಯಿದೆ. ಮೊಟೇಬೆನ್ನೂರು ಗ್ರಾಮದ ಬಳಿ‌ ಬಸ್ ಮುಂದೆ ಇದ್ದ ಕಾರ್ ಅಡ್ಡ ಬಂದಿತ್ತು ಎನ್ನಲಾಗಿದೆ.

ಕಾರ್ ಗೆ ಅಪಘಾತವಾಗೋದನ್ನ ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಮೊದಲು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಬಸ್ ಪಲ್ಟಿಯಾಗಿದೆ. ಸ್ಥಳಕ್ಕೆ ಹಾವೇರಿ ಎಸ್ಪಿ ಯಶೋದಾ ವಂಟಗೋಡಿ ಭೇಟಿ ನೀಡಿದ್ದು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಗಾಯಾಳುಗಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಲವು ಪುಟ್ಟ ಮಕ್ಕಳಿಗೂ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Puttur: ಪುತ್ತೂರು: ಜಿಲ್ಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆ ಮುಚ್ಚುವಿಕೆ: ಶಾಮೀಲಾದವರ ವಿರುದ್ದ ತನಿಖೆಗೆ ಕನ್ನಡ ಸೇನೆ ಆಗ್ರಹ

Comments are closed.